ಮತ್ತಿಬ್ಬರಿಗೆ ಕೊರೋನಾ…ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 13ಕ್ಕೆ ಏರಿಕೆ

masthmagaa.com:

ಬೆಂಗಳೂರು: ರಾಜ್ಯದ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೋನಾ ಪೀಡಿತರ ಸಂಖ್ಯೆ ರಾಜ್ಯದಲ್ಲಿ 13ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಅಮೆರಿಕಾ ಪ್ರವಾಸದಿಂದ ಮಾರ್ಚ್​ 6ರಂದು ಬೆಂಗಳೂರಿಗೆ ಬಂದಿದ್ದ 56 ವರ್ಷದ ವ್ಯಕ್ತಿ ಮತ್ತು ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದ 25 ವರ್ಷದ ಮಹಿಳೆಯಲ್ಲಿ ಕೊರೋನಾ ಪತ್ತೆಯಾಗಿದೆ. ಇವರನ್ನು ಪ್ರತ್ಯೇಕವಾಗಿ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಂತ ರಾಮುಲು ಟ್ವೀಟ್ ಮಾಡಿದ್ದಾರೆ.

ಜೊತೆಗೆ ಇವರಿಬ್ಬರ ಜೊತೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿದ್ದು, ಅವರೆಲ್ಲರನ್ನೂ ಅವರವರ ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮತ್ತೊಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply