ಈ ಎರಡು ಬಸ್​ಗಳಲ್ಲಿ ಪ್ರಯಾಣಿಸಿದವರು ತಪಾಸಣೆ ಮಾಡಿಸಿಕೊಳ್ಳಿ..!

masthmagaa.com:

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ ಇಬ್ಬರು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಬಸ್‌ಗಳಲ್ಲಿ ಸಂಚರಿಸಿದ ಪ್ರಯಾಣಿಕರು ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಅಂತ ಕೆಎಸ್‌ಆರ್‌ಟಿಸಿ ತಿಳಿಸಿದೆ.

ಮಾರ್ಚ್​ 18ರಂದು KA57 F3802 ನಂಬರಿನ ರಾಜಹಂಸ ಬಸ್​ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಜೆಸ್ಟಿಕ್​ನಿಂದ ದಾವಣಗೆರೆಗೆ ಹೊರಟಿರುತ್ತದೆ. ಈ ಬಸ್​ನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಮಾರ್ಚ್​ 21ರಂದು KA19 F3329 ನಂಬರಿನ ಕರ್ನಾಟಕ ಸಾರಿಗೆ ಬಸ್​ ಸಂಜೆ 4.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್​ನಿಂದ ಮಂಗಳೂರಿಗೆ ಹೊರಟಿರುತ್ತದೆ. ಈ ಬಸ್​ನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಹೀಗಾಗಿ ಈ ಎರಡು ಬಸ್​ಗಳಲ್ಲಿ ಪ್ರಯಾಣ ಮಾಡಿದ ಉಳಿದ ಪ್ರಯಾಣಿಕರು ಈ‌ ಕೂಡಲೇ ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ಕೋರಲಾಗಿದೆ ಅಂತ ಕೆಎಸ್​ಆರ್​ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

-masthmagaa.com

Contact Us for Advertisement

Leave a Reply