ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ..

masthmagaa.com:

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳಿಂದ ಉಗ್ರರ ಬೇಟೆ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ಪಾಂಪೋರ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಅಂತ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ. ಮತ್ತೊಂದು ವಿಚಾರ ಅಂದ್ರೆ ಎನ್​ಕೌಂಟರ್ ವೇಳೆ ಮತ್ತೊಬ್ಬ ಸ್ಥಳೀಯ ಉಗ್ರ ಶರಣಾಗಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply