ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರ ಹತ್ಯೆ

masthmagaa.com:

ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ಅರನ್ಪುರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆಸಲಾಗಿದೆ. ಜಿಲ್ಲಾ ಮೀಸಲು ಪಡೆ ಪೊಲೀಸರು ಮತ್ತು ನಕ್ಸಲ್ ನಿಗ್ರಹ ದಳದ ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಎರಡು ಕಡೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಅಂತ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply