ಕೇಂದ್ರದ ವಿರುದ್ಧ ಸಮರ: ವಿರೋಧ ಪಕ್ಷದ ನಾಯಕರನ್ನ ಭೇಟಿ ಮಾಡಿದ ದಿಲ್ಲಿ ಸಿಎಂ ಕೇಜ್ರಿವಾಲ್‌!

masthmagaa.com:

ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸಮರ ಸಾರಿದ್ದಾರೆ. ಇದಕ್ಕೆ ವಿಪಕ್ಷ ನಾಯಕರ ಬೆಂಬಲವನ್ನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವ್ರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತಾಡಿದ ಕೇಜ್ರಿವಾಲ್‌, ಸಂಸತ್ತಿನಲ್ಲಿ ನಮಗೆ ಸಪೋರ್ಟ್‌ ಮಾಡೋಕೆ ಉದ್ಧವ್ ಠಾಕ್ರೆ ಭರವಸೆ ನೀಡಿದ್ದಾರೆ. ಈ ಮಸೂದೆ ಸಂಸತ್ತಿನಲ್ಲಿ ಅಂಗೀಕಾರ ಆಗಿಲ್ಲ ಅಂದ್ರೆ 2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲ್ಲ ಅಂತ ಕೇಜ್ರಿವಾಲ್ ಹೇಳಿದ್ದಾರೆ. ಇದೇ ವೇಳೆ ನಾವೆಲ್ಲ ದೇಶ ಮತ್ತು ಪ್ರಜಾಪ್ರಭುತ್ವವನ್ನ ಉಳಿಸೋಕೆ ಒಟ್ಟಾಗಿ ಬಂದಿದ್ದೇವೆ. ನಮ್ಮನ್ನು ‘ವಿರೋಧ’ ಪಕ್ಷಗಳು ಅಂತ ಕರೆಯಬಾರದು. ನಿಜ ಹೇಳಬೇಕು ಅಂದ್ರೆ ವಾಸ್ತವವಾಗಿ ಕೇಂದ್ರ ಸರ್ಕಾರವನ್ನ ‘ವಿರೋಧ’ ಅಂತ ಕರೆಯಬೇಕು. ಯಾಕಂದ್ರೆ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಅಂತ ಉದ್ಧವ್‌ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ. ಅಂದ್ಹಾಗೆ ವಿರೋಧ ಪಕ್ಷಗಳ ಬೆಂಬಲವನ್ನ ಪಡೆಯಲು ಪ್ರಯತ್ನಿಸುತ್ತಿರುವ ಕೇಜ್ರಿವಾಲ್‌ ನಿನ್ನೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನ ಭೇಟಿಯಾಗಿದ್ದರು. ಇತ್ತೀಚೆಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ರನ್ನ ಕೂಡ ಭೇಟಿಯಾಗಿದ್ದು, ಸಂಪೂರ್ಣ ಬೆಂಬಲ ನೀಡೋದಾಗಿ ನಿತೀಶ್‌ ಹೇಳಿದ್ದರು.

-masthmagaa.com

Contact Us for Advertisement

Leave a Reply