ಭಾರತಕ್ಕೆ ಭೇಟಿ ನೀಡಲಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ!

masthmagaa.com:

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟಾನಿಯೊ ಗುಟೆರೆಸ್ 3 ದಿನ ಭಾರತಕ್ಕೆ ಭೇಟಿ ನೀಡಲಿದ್ದಾರೆ. 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಇದು ಗುಟೆರೆಸ್‌ ಅವ್ರ ಮೊದಲ ಭೇಟಿಯಾಗಿದೆ. ಮೊದಲ ದಿನದಂದು ಮುಂಬೈನ ತಾಜ್ ಹೋಟೆಲ್‌ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಸಲ್ಲಿಸಲಿದ್ದಾರೆ. ನಂತರ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಉದ್ದೇಶಿಸಿ ಮಾತನಾಡುತ್ತಾರೆ ಎನ್ನಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ. ಅಕ್ಟೋಬರ್ 20 ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರೋ ಮಿಷನ್ ಲೈಫ್ ಲೋಗೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.

-masthmagaa.com

Contact Us for Advertisement

Leave a Reply