ಮೊರೊಕ್ಕೊದಲ್ಲಿ ಪ್ರಬಲ ಭೂಕಂಪ: 632 ಬಲಿ

masthmagaa.com:

ಮೊರೊಕ್ಕೊದಲ್ಲಿ ನಿನ್ನೆ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಸ್ಕೇಲ್‌ನಲ್ಲಿ 6.8 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ ಕನಿಷ್ಠ 632 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಅಂತ ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಈ ಭೀಕರ ಭೂಕಂಪದಿಂದ ಮನೆಗಳು, ಕಟ್ಟಡಗಳು ಉರುಳಿದ್ದು, ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಅಂತ ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಇತ್ತ ಘಟನೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಕಠಿಣ ಸಂದರ್ಭದಲ್ಲಿ ಮೊರೊಕ್ಕೊಗೆ ಎಲ್ಲಾ ರೀತಿಯ ಅಗತ್ಯ ನೆರವು ನೀಡೋದಾಗಿ ಅನೌನ್ಸ್‌ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply