ಕೊರೋನಾ ಹೋರಾಟಕ್ಕೆ 5 ತಿಂಗಳ ವೇತನವನ್ನೇ ಕೊಟ್ಟ ಮುಖ್ಯಮಂತ್ರಿ..!

masthmagaa.com:

ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿರೋ ಕೊರೋನಾ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಹಲವು ಉದ್ಯಮಿಗಳು, ಸೆಲೆಬ್ರಿಟಿಗಳು, ರಾಜಕಾರಣಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ದೇಣಿಗೆ ನೀಡುವ ಮೂಲಕ ಸಹಾಯಹಸ್ತ ಚಾಚುತ್ತಿದ್ದಾರೆ. ಇದರ ನಡುವೆ ಉತ್ತರಾಖಂಡ್​ ಸಿಎಂ ತಮ್ಮ 5 ತಿಂಗಳ ವೇತನವನ್ನೇ ದೇಣಿಗೆ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಉತ್ತರಾಖಂಡ್​ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ತಮ್ಮ 5 ತಿಂಗಳ ವೇತನವನ್ನ ಸಿಎಂ ಪರಿಹಾರ ನಿಧಿಗೆ ನೀಡೋದಾಗಿ ಘೋಷಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಮಾತ್ರವಲ್ಲ ಇಂತಹ ಸಂದರ್ಭದಲ್ಲಿ ಅವರ ಕುಟುಂಬ ಕೂಡ ನೆರವಿಗೆ ಧಾವಿಸಿದೆ. ತ್ರಿವೇಂದ್ರ ಸಿಂಗ್ ರಾವತ್ ಅವರ ಪತ್ನಿ 1 ಲಕ್ಷ ದೇಣಿಗೆ ನೀಡಿದ್ರೆ, ಅವರ ಇಬ್ಬರು ಪುತ್ರಿಯರು 52 ಸಾವಿರ ರೂಪಾಯಿ ನೀಡಿದ್ದಾರೆ. ಈ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬಸ್ಥರಿಗೆ ಮಾದರಿಯಾಗಿದ್ದಾರೆ.

-masthmagaa.com

Contact Us for Advertisement

Leave a Reply