ಉತ್ತರಾಖಂಡ್​ದಲ್ಲಿ ಮಳೆರಾಯನ ರೌದ್ರನರ್ತನ! ಸಾವಿನ ಸಂಖ್ಯೆ 46ಕ್ಕೆ ಏರಿಕೆ

masthmagaa.com:

ಉತ್ತರಾಖಂಡ್​ನಲ್ಲಿ ಸತತ ನಾಲ್ಕನೇ ದಿನವೂ ಮಳೆಯಬ್ಬರ ಮುಂದುವರಿದಿದೆ. ಮೃತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಭೂಕುಸಿತದಿಂದಾಗಿ ಮನೆಗಳು ನೆಲಸಮವಾಗಿದ್ದು, ಅದ್ರ ಅಡಿಯಲ್ಲಿ ಮತ್ತಷ್ಟು ಜನ ಸಿಲುಕಿರುವ ಸಾಧ್ಯತೆ ಇದೆ. ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳು ಕೆಸರು ನೀರಲ್ಲಿ ಮುಳುಗಿ ಹೋಗಿವೆ. ಕಟ್ಟಡಗಳು ಕೂಡ ನೀರಿನಿಂದ ಆವರಿಸಿದ್ದು, ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಕೆಲ ಸ್ಥಳೀಯರು ಮತ್ತು ಪ್ರವಾಸಿಗರು ಇನ್ನೂ ಕೂಡ ಕೆಲ ಅಪಾಯಕಾರಿ ಪ್ರದೇಶಗಳಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗಾಗಿ ಶೋಧಕಾರ್ಯ ಮುಂದುವರಿದಿದೆ. 1300 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ 17 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಈ ನಡುವೆ ಗೃಹಸಚಿವ ಅಮಿತ್ ಶಾ ಉತ್ತರಾಖಂಡ್​​ಗೆ ಭೇಟಿ ನೀಡಿ ಪ್ರವಾಹದ ಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಇನ್ನು ಕೇರಳದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಅಕ್ಟೋಬರ್ 16ರಿಂದ ಸುರಿದ ಮಳೆಗೆ ಒಟ್ಟು 39 ಮಂದಿ ಬಲಿಯಾಗಿದ್ದಾರೆ. ಒಟ್ಟು 217 ಮನೆಗಳು ನಾಶವಾಗಿವೆ.
ಮತ್ತೊಂದ್ಕಡೆ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಮಳೆಯಾಗಿದೆ.

-masthmagaa.com

Contact Us for Advertisement

Leave a Reply