ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟ ವಿ ಸೋಮಣ್ಣ!

masthmagaa.com:

ವಿಧಾನಸಭೆ ಸೋಲಿನ ಬಳಿಕ ಮೊದಲ ಬಾರಿಗೆ ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಮಾಜಿ ಸಚಿವ ವಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಮಾತಾಡಿದ ಸೋಮಣ್ಣ, ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಅಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ, ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಅಂತ ಬೇಸರ ವ್ಯಕ್ತಪಡಿಸಿದರು. ಇದೇ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ ಅಂತ ಪರೋಕ್ಷವಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇನ್ನೊಂದ್‌ ಕಡೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗೋಕೆ ಎಲ್ಲರಿಗೂ ಆಸೆಯಿದೆ. ನಾನು ಕೂಡ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ರೆ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರ್ದಾ? ಅಂತ ಸಂಸದ ರಮೇಶ್‌ ಜಿಗಜಿಣಗಿ ಪ್ರಶ್ನಿಸಿದ್ದಾರೆ.

-masthmagaa.com

Contact Us for Advertisement

Leave a Reply