ತೀವ್ರಗೊಂಡ ಕಾವೇರಿ ಕೂಗು ಸೆಪ್ಟೆಂಬರ್‌ 26ಕ್ಕೆ ಬೆಂಗಳೂರು ಬಂದ್‌?

masthmagaa.com:

ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್‌ ಬೊಮ್ಮಾಯಿ, ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತ್ತ ಮಂಡ್ಯದಲ್ಲೂ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಸೆಪ್ಟೆಂಬರ್‌ 26ರಂದು ಬೆಂಗಳೂರು ಬಂದ್‌ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ಕೊಟ್ಟಿದೆ. ಈ ಬಗ್ಗೆ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದು, ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಬೇಕು. ಇದು ನಮ್ಮ ಬಂದ್ ಅಲ್ಲ, ಬೆಂಗಳೂರಿನ ನಾಗರಿಕರ ಬಂದ್. ಫಿಲ್ಮ್ ಛೇಂಬರ್, ಐಟಿ ಕಂಪನಿಗಳು ಬೆಂಬಲ ಕೊಡಬೇಕು. ಸರ್ಕಾರ ವಿಶೇಷ ವಿಧಾನಮಂಡಲದ ಅಧಿವೇಶನ ಕರೆಯಬೇಕು ಅಂತ ಒತ್ತಾಯಿಸಿದ್ದಾರೆ. ಅತ್ತ ಕಾವೇರಿ ನದಿ ಕರ್ನಾಟಕಕ್ಕೆ ಸೇರಿದ್ದಲ್ಲ, ಕರ್ನಾಟಕ ಕಾವೇರಿ ನದಿಯ ಮಾಲೀಕನಲ್ಲ ಅಂತ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್‌ ಹೇಳಿಕೆ ಕೊಟ್ಟಿದ್ದಾರೆ.

-masthmagaa.com

Contact Us for Advertisement

Leave a Reply