ಕಾಂಗ್ರೆಸ್ ನಾಯಕ, ಮಾಜಿ ಮಂತ್ರಿ ಆರ್​​.ಎಲ್​ ಜಾಲಪ್ಪ ನಿಧನ

masthmagaa.com:

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ನಿಧನರಾಗಿದ್ದಾರೆ. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 98 ವರ್ಷದ ಇವರನ್ನು ಡಿಸೆಂಬರ್ 10ರಂದು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಸಂಜೆ ವಿಧಿವಶರಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿರೋ ಇವರ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

-masthmagaa.com

Contact Us for Advertisement

Leave a Reply