ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪೀಕರ್​​​​ರಿಂದ ಈ ನಿರ್ಧಾರ..!

ವಿಧಾನಸೌಧದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ನಿರ್ಧಾರ ಕೈಗೊಂಡಿದ್ದಾರೆ. ವಿಧಾನಸಭೆ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದವರನ್ನೇ ತಂದು ತಮ್ಮ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಓಂಪ್ರಕಾಶ್ ಈ ಹಿಂದೆಯೇ ವಿಧಾನಸಭೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ್ದರು. ಆದ್ರೆ ಈಗ ಪುನಃ ಅವರನ್ನೇ ಸ್ಪೀಕರ್ ಸಲಹೆಗಾರರಾಗಿ ನೇಮಿಸಲಾಗಿದೆ. ವಿಧಾನಸಭೆ ಸಚಿವಾಲಯದಲ್ಲಿ ಸ್ಪೀಕರ್ ಕ್ರಮಕ್ಕೆ ಭಾರಿ ಅಸಮಾಧಾನ ವ್ಯಕ್ತವಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಧಾರ ಇತಿಹಾಸದಲ್ಲೇ ಮೊದಲು ಎನ್ನಲಾಗಿದೆ. ಕಳೆದ ವಾರವಷ್ಟೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದ ಸ್ಪೀಕರ್ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು.

Contact Us for Advertisement

Leave a Reply