ದಕ್ಷಿಣ ಆಫ್ರಿಕಾ ಸರಣಿಯಿಂದ ದೂರ ಉಳಿಯಲಿದ್ದಾರಾ ಕಿಂಗ್‌ ಕೊಹ್ಲಿ?

masthmagaa.com:

ವಿಶ್ವಕಪ್‌ ಬಳಿಕ ವಿಶ್ರಾಂತಿ ಪಡಿತಿರುವ ಟೀಮ್‌ ಇಂಡಿಯಾ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮುಂಬರೋ ಸೌತ್‌ ಆಫ್ರಿಕಾ ಸರಣಿಯಿಂದ ದೂರ ಉಳಿಯಲಿದ್ದಾರೆ ಅಂತ ತಿಳಿದು ಬಂದಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿರುವ ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವಾಪಸ್​ ಆಗಲಿದ್ದಾರೆ. ಆದ್ರೆ ವಿರಾಟ್​ ಕೊಹ್ಲಿ ಟಿ-20 ಹಾಗೂ ಏಕದಿನ ಪಂದ್ಯಗಳಲ್ಲಿ ಆಡ್ತಿಲ್ಲ ಅಂತ ಗೊತ್ತಾಗಿದೆ. ಈಗಾಗಲೇ ಕೊಹ್ಲಿ ಈ ಬಗ್ಗೆ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ತಿಳಿಸಿರುವುದಾಗಿ ವರದಿಯಾಗಿದೆ. ಅಲ್ದೆ ಟೆಸ್ಟ್ ಕ್ರಿಕೆಟ್ ಆಡುವುದಾಗಿ ಬಿಸಿಸಿಐಗೆ ತಿಳಿಸಿದ್ದು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯಲ್ಲಿ ಆಡ್ಬೋದು ಎನ್ನಲಾಗಿದೆ.

-masthmagaa.com

Contact Us for Advertisement

Leave a Reply