ಹರಿಯಾಣ, ಮಹಾರಾಷ್ಟ್ರದಲ್ಲಿ ಮತದಾನ ಶುರು..

ದೆಹಲಿ: ಹರಿಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭೆಗೆ ಮತದಾನ ಆರಂಭವಾಗಿದೆ. ಹರಿಯಾಣದ 90 ಮತ್ತು ಮಹಾರಾಷ್ಟ್ರದ 288 ಸ್ಥಾನಗಳಿಗೆ  ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಹೊರಬೀಳಲಿದೆ.

ಮಹಾರಾಷ್ಟ್ರದ 3237 ಹಾಗೂ ಹರಿಯಾಣದಲ್ಲಿ 1169  ಅಭ್ಯರ್ಥಿಗಳ ಭವಿಷ್ಯ ಇಂದು ಇವಿಎಂ ಯಂತ್ರಗಳಲ್ಲಿ ಭದ್ರವಾಗಲಿದೆ. ಹರಿಯಾಣದಲ್ಲಿ 19 ಸಾವಿರದ 578 ಹಾಗೂ ಮಹಾರಾಷ್ಟ್ರದಲ್ಲಿ 96 ಸಾವಿರದ 661 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹರಿಯಾಣದಲ್ಲಿ ಬಿಜೆಪಿ, ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಲೋಕ್ ದಳ ನಡುವೆ ತೀವ್ರ ಪೈಪೋಟಿ ಇದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 150, ಶಿವಸೇನಾ 124 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಹಾಕಿದ್ದು , ಉಳಿದ ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.  ಎನ್ ಸಿಪಿ ಜೊತೆಗಿನ ಮೈತ್ರಿಯೊಂದಿಗೆ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ.

Contact Us for Advertisement

Leave a Reply