masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 11,271 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 285 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 44 ಲಕ್ಷದ 37 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,63,530 ಆಗಿದೆ.

ಕಳೆದ 24 ಗಂಟೆಗಳಲ್ಲಿ 11,376 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 38 ಲಕ್ಷದ
37 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 35 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.26 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.35 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 12.55 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 62.37 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 57.43 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 112.01 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply