ರಾಜ್ಯದ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ಕೊಡ್ತೀವಿ: ಶಿಕ್ಷಣ ಸಚಿವ

masthmagaa.com:

ರಾಜ್ಯ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ಕೊಡಲು ನಿರ್ಧರಿಸಲಾಗಿದೆ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಾರಕ್ಕೆ 2 ಮೊಟ್ಟೆ ಕೊಡುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಂಡಿದ್ದೆ. ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅವರಿಗೆ ಎಲ್ಲಾ ಅಧಿಕಾರ ಕೊಟ್ಟಿದ್ದೇವೆ. ಮೊಟ್ಟೆ ಕೊಡಲು ಸದ್ಯ 280 ಕೋಟಿ ರೂಪಾಯಿ ಯೋಜನೆ ಮಾಡಿಕೊಂಡಿದ್ದೇವೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಕೊಡಲಾಗುತ್ತೆ. ಮೊಟ್ಟೆ ತಿನ್ನದೇ ಇರೋರಿಗೆ ಚಿಕ್ಕಿ, ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಕ್ವಾಲಿಟಿ ಚೆನ್ನಾಗಿಲ್ಲ ಅಂದ್ರೆ SDMC ಜವಾಬ್ದಾರಿ ಅಂತ ಮಧು ಬಂಗಾರಪ್ಪ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply