ಆರ್ಯನ್ ಖಾನ್​​​​ಗೆ ಜಾಮೀನು ನೀಡಲು ಕೋರ್ಟ್ ನಕಾರ!

masthmagaa.com:

ಹಡಗಿನಲ್ಲಿ ಮಾದಕ ಪಾರ್ಟಿ ಪ್ರಕರಣ ಸಂಬಂಧ ಅರೆಸ್ಟ್ ಆಗಿರೋ ಶಾರೂಖ್ ಖಾನ್ ಮಗ ಆರ್ಯನ್ ಖಾನ್​​ಗೆ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎನ್​ಸಿಬಿ, ಆರ್ಯನ್ ಖಾನ್ ಮತ್ತು ನಟಿಯೊಬ್ಬರ ನಡುವಿನ ಮಾದಕ ವಸ್ತುಗಳಿಗೆ ಸಂಬಂಧಿಸಿದ ವಾಟ್ಸಾಪ್ ಚಾಟ್​​ನ್ನು ಕೋರ್ಟ್​​​ಗೆ ಒಪ್ಪಿಸಿದ್ದೀವಿ ಅಂತ ಹೇಳಿದ್ದಾರೆ. ಅಕ್ಟೋಬರ್ 8ರಂದು ಆರ್ಯನ್ ಖಾನ್ ಮತ್ತು ಅವರ ಸ್ನೇಹಿತ ಅರ್ಬಾಜ್ ಮರ್ಚೆಂಟ್​​ಗೆ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಸದ್ಯ ಆರ್ಯನ್ ಖಾನ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಅಕ್ಟೋಬರ್ 3ರಂದು ಈ ಪ್ರಕರಣ ಸಂಬಂಧ ಎನ್​ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಸೇರಿದಂತೆ ಐವರನ್ನು ಅರೆಸ್ಟ್ ಮಾಡಿದ್ರು. ಇದೀಗ ಆರ್ಯನ್ ಪರ ವಕೀಲರು ಬಾಂಬೆ ಹೈಕೋರ್ಟ್​ ಮೊರೆ ಹೋಗಲು ನಿರ್ಧರಿಸಿದ್ದಾರೆ.

-masthmagaa.com

Contact Us for Advertisement

Leave a Reply