ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಎಂಬಲ್ಲಿ ಅತಿಹೆಚ್ಚು 193 ಮಿಲಿಮೀಟರ್‌ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ. ಅಲ್ಲಲ್ಲಿ ಅಧಿಕ ಮಳೆಯಾಗೋ ಸಾಧ್ಯತೆ ಇದೆ.ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅಧಿಕ ಮಳೆ, ಇನ್ನುಳಿದ ಕಡೆ ಸಾಧರಣ ಮಳೆಯಾಗೋ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆ ಅಬ್ಬರದ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕಲಬುರಗಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ನೆರೆಯ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನಲ್ಲೂ ಭಾರಿ ಮಳೆಯ ಮುನ್ಸೂಚನೆ ಇದ್ದು ಎರಡೂ ರಾಜ್ಯಗಳ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಬಹುತೇಕ ಜಿಲ್ಲೆಗಳಿಗೆ ಕೂಡ ಅಲರ್ಟ್‌ ಜಾರಿ ಮಾಡಲಾಗಿದೆ.

-masthmagaa.com

Contact Us for Advertisement

Leave a Reply