ಇವತ್ತು ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿಉಡುಪಿ ಜಿಲ್ಲೆಯ ಬೈಂದೂರ ತಾಲ್ಲೂಕಿನ ಕಾರ್ಗಲ್ ಎಂಬಲ್ಲಿ ಅತಿಹೆಚ್ಚು ಅಂದ್ರೆ 177 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ. ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಹಾಗೂ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆ.ಇನ್ನುಳಿದ ಕಡೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಬೆಳಗಾವಿ, ಉತ್ತರಕನ್ನಡ, ಗದಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೊಂದ್ಕಡೆ ಬೆಂಗಳೂರಿನ ಪರಿಸ್ಥಿತಿಯನ್ನ ಇಟ್ಕೊಂಡು ಟ್ರೋಲ್‌ ಮಾಡ್ತಿರೋ ಅನ್ಯರಾಜ್ಯದವರ ವಿರುದ್ದ ಈಗ ಭಾರಿ ಆಕ್ರೋಶ ಕೇಳಿ ಬಂದಿದ್ದ ಬೆಂಗಳೂರು ಬಿಟ್ಟು ಹೊರಡಿ ಅನ್ನೋ ಅಭಿಯಾನಗಳು ಟ್ರೆಂಡಿಂಗ್‌ ಆಗಿವೆ.

-masthmagaa.com

Contact Us for Advertisement

Leave a Reply