ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರ್ವಾಡ್‌ ಎಂಬಲ್ಲಿ ಅತಿಹೆಚ್ಚು 155 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ, ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾದ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ, ಅಲ್ಲಲ್ಲಿ ಕಡಿಮೆ ಮಳೆಯ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply