ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಗೋಡ ಎಂಬಲ್ಲಿ ಅತಿಹೆಚ್ಚು 40 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಕಡಿಮೆ ಮಳೆಯಾಗಲಿದೆ. ಅಲ್ಲಲ್ಲಿ ಸಾಧರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕಡಿಮೆ ಮಳೆ. ಅಲ್ಲಲ್ಲಿ ಸಾಧರಣ ಮಳೆಯಾಗಲಿದೆ. ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಕಡಿಮೆ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಯಾವ ಜಿಲ್ಲೆಗಳಿಗೂ ಯಾವುದೇ ಅಲರ್ಟ್‌ ಘೋಷಣೆ ಮಾಡಿಲ್ಲ.

-masthmagaa.com

Contact Us for Advertisement

Leave a Reply