ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹರ್ಲಾಪುರ ಎಂಬಲ್ಲಿ ಅತಿಹೆಚ್ಚು ಅಂದ್ರೆ 186.5 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಉತ್ತರ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ. ಅಲ್ಲಲ್ಲಿ ಅಧಿಕ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳ ಕೆಲವು ಕಡೆ ಸಾಧಾರಣ. ಉಳಿದೆಡೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೂ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

-masthmagaa.com

Contact Us for Advertisement

Leave a Reply