masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಳ್ಪ ಎಂಬಲ್ಲಿ ಅತಿಹೆಚ್ಚು 202 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಇನ್ನುಳಿದ ಕಡೆ ಭಾರಿ ಅಂದ್ರೆ ಭಾರಿ ಮಳೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಇನ್ನುಳಿದಂತೆ ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಉತ್ತರಕನ್ನಡ, ಬೆಳಗಾವಿ, ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾಸನ‌, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಪಕ್ಕದ ತಮಿಳುನಾಡು ಹಾಗೂ ಕೇರಳದ ಕೆಲ ಜಿಲ್ಲೆಗಳಿಗೂ ಭಾರಿ ಮಳೆಯ ಮುನ್ಸೂಚನೆ ಇದ್ದು ಕೆಲವೊಂದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಕೊಡಗಿನ ಗಡಿ ಭಾಗದಲ್ಲಿ ‌ಭಾರಿ ಮಳೆ ಸುರಿದಿದ್ದು, ರಾಷ್ಟ್ರೀಯ ಹೆದ್ದಾರಿ 275ರಲ್ಲಿ‌ ಬಿರುಕು ಉಂಟಾಗಿದೆ.

-masthmagaa.com

Contact Us for Advertisement

Leave a Reply