ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದಲ್ಲಿ ಸುರೀತಿರೋ ಅಬ್ಬರದ ಮಳೆ ಇವತ್ತೂ ಕಂಟಿನ್ಯೂ ಆಗಿದೆ. ಕಳೆದ 24 ಗಂಟೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಾಡೆ ಎಂಬಲ್ಲಿ ಅತಿಹೆಚ್ಚು ಅಂದ್ರೆ 265.5 ಮಿಲಿಮೀಟರ್‌ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗಗಳ ಬಹುತೇಕ ಕಡೆ ಸಾಧರಣ ಮಳೆ ಇನ್ನುಳಿದ ಕೆಲವು ಕಡೆ ಅತ್ಯಧಿಕ ಮಳೆಯಾಗೋ ಸಾಧ್ಯತೆ ಇದೆ. ಇನ್ನುಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧರಣ ಇನ್ನುಳಿದ ಕಡೆ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆ ಅಧಿಕ ಇನ್ನು ಕೆಲವುಕಡೆ ಕಡಿಮೆ ಪ್ರಮಾಣದ ಮಳೆ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಹಾಸನ, ಬೆಳಗಾವಿ, ಕಲಬುರಗಿ, ಬೀದರ್‌ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಸಾಕಷ್ಟು ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಇನ್ನೂ ಎರಡು SDRF ತಂಡಗಳನ್ನು ರಚಿಸೋಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಅಂತ ಮೂಲಗಳು ತಿಳಿಸಿವೆ. ಇನ್ನು ಬೆಳಗಾವಿಯಲ್ಲಿ ಮಳೆಯ ಅಬ್ಬರಕ್ಕೆ ದಾರಿ ಕಾಣದ ಬಸ್ ಚಾಲಕನೊಬ್ಬ‌ ಬಸ್‌ನ್ನ ಡಿವೈಡರ್‌ಗೆ ಗುದ್ದಿದ್ದು ಬಸ್‌ ಪಲ್ಟಿಯಾಗಿದೆ. ಬೆಳಗಾವಿಯಿಂದ ಹಿರೇಕೆರೂರಿಗೆ ತೆರುಳಿತಿದ್ದಾಗ ಈ ಘಟನೆ ನಡೆದಿದ್ದು ಸದ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅತ್ತ ಮಧ್ಯಪ್ರದೇಶದಲ್ಲಿ ಸಿಡಿಲು ಬಡಿದು ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಸಿಡಿಲಿನ ತೀವ್ರತೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬಂದ ಇಬ್ಬರು ಪ್ರಾಣ ಬಿಟ್ಟಿದ್ದಾರೆ.

-masthmagaa.com

Contact Us for Advertisement

Leave a Reply