ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಅಂಡಿಗೆ ಎಂಬಲ್ಲಿ ಅತಿಹೆಚ್ಚು 129 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಅಧಿಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೆಲವುಕಡೆ ಸಾಧರಣ ಉಳಿದ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗಲಿದೆ. ಇನ್ನು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಚದುರಿದಂತೆ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

-masthmagaa.com

Contact Us for Advertisement

Leave a Reply