ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ ಎಂಬಲ್ಲಿ ಅತಿಹೆಚ್ಚು 115 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಯಾವುದೇ ಜಿಲ್ಲೆಗಳಿಗೂ ಯಾವುದೇ ಅಲರ್ಟ್‌ನ್ನ ಘೋಷಣೆ ಮಾಡಲಾಗಿಲ್ಲ.

-masthmagaa.com

Contact Us for Advertisement

Leave a Reply