ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಎಂಬಲ್ಲಿ ಅತಿಹೆಚ್ಚು 229.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಅಧಿಕ ಮಳೆಯಾಗಲಿದ್ದು ಕೆಲವು ಕಡೆ ಸಾಧರಣ ಮಳೆಯ ಸಾಧ್ಯತೆ ಇದೆ. ಮಲೆನಾಡು ಭಾಗಗಳ ಕೆಲವು ಕಡೆ ಅಧಿಕ ಮತ್ತೆ ಕೆಲವು ಕಡೆ ಸಾಧರಣ ಮಳೆಯಾಗಲಿದೆ. ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧರಣ ಉಳಿದೆಡೆ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ದಕ್ಷಿಣಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

-masthmagaa.com

Contact Us for Advertisement

Leave a Reply