ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಘಟ್ಟಮಾದಮಂಗಲ ಎಂಬಲ್ಲಿ ಅತಿಹೆಚ್ಚು 156 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಕೆಲವೊಂದುಕಡೆ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply