ಅಮೆರಿಕದಲ್ಲಿ ಪ್ರಧಾನಿ ಮೋದಿಯವರನ್ನ ಪ್ರಶ್ನಿಸಿದ್ದ ಪತ್ರಕರ್ತೆಗೆ ಕಿರುಕುಳ! ಅಮೆರಿಕ ಹೇಳಿದ್ದೇನು?

masthmagaa.com:

ಪ್ರಧಾನಿ ಮೋದಿಯವರ ಅಮೆರಿಕ ಪ್ರವಾಸದ ವೇಳೆ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಶ್ನಿಸಿದ್ದ ಪತ್ರಕರ್ತೆಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಕಿರುಕುಳ ನೀಡ್ತಿರೋ ಬಗ್ಗೆ ವೈಟ್‍ಹೌಸ್ ಪ್ರತಿಕ್ರಿಯೆ ನೀಡಿದೆ. ಪತ್ರಕರ್ತೆ ಸಬ್ರಿನಾ ಸಿದ್ದಿಕಿಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಕೆಲವರು ಕಿರುಕುಳ ನೀಡುತ್ತಿದ್ದಾರೆ. ಇದನ್ನ ವೈಟ್‍ಹೌಸ್ ಬಲವಾಗಿ ಖಂಡಿಸುತ್ತದೆ. ಇದು ಪ್ರಜಾಪ್ರಭುತ್ವ ನೀತಿಗಳಿಗೆ ವಿರುದ್ಧವಾಗಿದೆ ಅಂತ ವೈಟ್‍ಹೌಸ್ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ. ಅಂದ್ಹಾಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ಮೋದಿ, ಭಾರತದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಬಲವಾಗಿವೆ. ನಮ್ಮ ರಕ್ತದಲ್ಲೇ ಪ್ರಜಾಪ್ರಭುತ್ವ ಸೇರಿಕೊಂಡಿದೆ ಅಂತ ಹೇಳಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ, ಪತ್ರಕರ್ತೆಯನ್ನು ಹಲವರು ನಿಂದಿಸಿದ್ದಾರೆ. ಅಲ್ಲದೇ ಮಾನಸಿಕವಾಗಿ ಹಿಂಸೆಯಾಗುವಂತಹ ಪದಗಳ ಬಳಕೆ ಮಾಡಿದ್ದಾರೆ ಅನ್ನೊ ಆರೋಪ ಕೇಳಿ ಬಂದಿದೆ. ಇದಕ್ಕೆ ಅಮೆರಿಕ ಪ್ರತಿಕ್ರಿಯಿಸಿದ್ದು, ನಾವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧರಾಗಿದ್ದೇವೆ. ಪತ್ರಕರ್ತರಿಗೆ ಕಿರುಕುಳ ನೀಡುವ ಪ್ರಯತ್ನವನ್ನು ನಾವು ಖಂಡಿಸುತ್ತೇವೆ ಅಂತ ಹೇಳಿದೆ.

-masthmagaa.com

Contact Us for Advertisement

Leave a Reply