ʻನಾನಂತೂ ಆ ಹುದ್ದೆಯ ಆಕಾಂಕ್ಷಿಯಲ್ಲ!ʼ ಕುತೂಹಲ ಕೆರಳಿಸಿದ ಸಿಟಿ ರವಿ ಹೇಳಿಕೆ!

masthmagaa.com:

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ ಅಂತ ಮಾಜಿ ಶಾಸಕ ಸಿಟಿ ರವಿ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿದ ನಂತರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸೆಲೆಕ್ಟ್‌ ಆಗ್ತಾರೆ ಅನ್ನೋ ಸುದ್ದಿ ಹರಿದಾಡಿತ್ತು. ಆದ್ರೆ ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. ಪಕ್ಷದ ರಾಜ್ಯಾಧ್ಯಕ್ಷ ಅನ್ನೋದು ಜವಾಬ್ದಾರಿಯುತವಾದ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತದ್ದಲ್ಲ, ಈ ಬಗ್ಗೆ ಪಕ್ಷ ನಿರ್ಧರಿಸುತ್ತೆ. ಆದ್ರೆ ನಾನಂತೂ ಆ ಹುದ್ದೆಯ ಆಕಾಂಕ್ಷಿಯಲ್ಲ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply