masthmagaa.com:

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆಯ 28,637‬ ಜನರಿಗೆ ಹೊಸದಾಗಿ ಸೋಂಕು ತಗುಲಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲಿ ಸೋಂಕು ಕಾಣಿಸಿಕೊಂಡಾಗಿನಿಂದ ಒಂದೇ ದಿನದಲ್ಲಿ ದೃಢಪಟ್ಟ ಅತಿ ಹೆಚ್ಚು ಪ್ರಕರಣ ಇದಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8,49,553 ಆಗಿದೆ.

ಕಳೆದ 24 ಗಂಟೆಗಳಲ್ಲಿ 551 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 22,674 ಆಗಿದೆ. ಒಟ್ಟು 5,34,621 ಸೋಂಕಿತರು ಗುಣಮುಖರಾಗಿದ್ದಾರೆ. 2,92,258 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರಿ 2.46 ಲಕ್ಷ ದಾಟಿದೆ. ತಮಿಳುನಾಡಿನಲ್ಲಿ 1.34 ಲಕ್ಷ ಮತ್ತು ದೆಹಲಿಯಲ್ಲಿ 1.10 ಲಕ್ಷ ದಾಟಿದೆ. ರಾಜ್ಯವಾರು ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ 5ನೇ ಸ್ಥಾನಕ್ಕೆ ಬಂದಿದೆ.

-masthmagaa.com
Contact Us for Advertisement

Leave a Reply