ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, ಮಗಳು ಸಜೀವ ದಹನ!

masthmagaa.com:

ರಸ್ತೆ ಬಳಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಎದುರೇ 23 ವರ್ಷದ ಸೌಂದರ್ಯ ಹಾಗೂ ಅವರ ಹಸಿಗೂಸಿನ ದೇಹ ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ವೈಟ್‌ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ. ಇದೀಗ ಬೆಸ್ಕಾಂ ಅಧಿಕಾರಿಗಳ ವಿರುದ್ದ ಕಾಡುಗೋಡಿ ಪೋಲಿಸ್‌ ಠಾಣೆಗೆ ದೂರು ದಾಖಲಾಗಿದ್ದು, ಅವರ ಮೇಲೆ ಪೋಲಿಸರು ಕೇಸ್‌ ದಾಖಲಿಸಿ ವಿಚಾರಣೆ ನಡೆಸ್ತಿದ್ದಾರೆ.

-masthmagaa.com

Contact Us for Advertisement

Leave a Reply