ಬಸ್‌ನಲ್ಲಿ ಉಚಿತವಾಗಿ ಓಡಾಡಲು ಮಹಿಳೆಯರಿಗೆ ʻಶಕ್ತಿ ಸ್ಮಾರ್ಟ್‌ಕಾರ್ಡ್‌ʼ ಅಗತ್ಯ!

masthmagaa.com:

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ʻಶಕ್ತಿʼ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನ ಸರ್ಕಾರ ಇಂದು ಹೊರಡಿಸಿದೆ. ಅದ್ರಂತೆ ಮಹಿಳೆಯರು ಉಚಿತವಾಗಿ ಪ್ರಯಾಣಿಸಬೇಕಿದ್ರೆ, ʻಶಕ್ತಿ ಸ್ಮಾರ್ಟ್‌ಕಾರ್ಡ್‌ʼ ಹೊಂದುವುದು ಕಡ್ಡಾಯವಾಗಿರಲಿದೆ. ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿಗಳನ್ನ ಪಡೆದು ಶಕ್ತಿ ಸ್ಮಾರ್ಟ್‌ಕಾರ್ಡ್‌ಗಳನ್ನ ಪಡೆಯಬಹುದು. ಕಾರ್ಡ್‌ಗಳನ್ನ ವಿತರಿಸುವ ಪ್ರಕ್ರಿಯೆಯನ್ನ ಮುಂದಿನ 3 ತಿಂಗಳ ಒಳಗೆ ಪೂರ್ಣಗೊಳಿಸಬೇಕು ಅಂತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನು ಸ್ಮಾರ್ಟ್‌ಕಾರ್ಡ್‌ ಅನ್ನ ವಿತರಿಸುವವರೆಗೆ ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿಸುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಅಂದ್ರೆ ಆಧಾರ್‌ ಕಾರ್ಡ್‌, ವೋಟರ್‌ ಐಡಿಗಳನ್ನ ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಅಂತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇನ್ನೊಂದ್‌ ಕಡೆ ಯುವನಿಧಿ ಗ್ಯಾರಂಟಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಸರ್ಕಾರ ಆದೇಶವನ್ನ ಪ್ರಕಟಿಸಿದೆ. ಪದವಿ-ಡಿಪ್ಲೋಮಾ ಪಡೆದಿರುವ ವಿದ್ಯಾರ್ಥಿಗಳು ಉತ್ತೀರ್ಣರಾಗಿ 6 ತಿಂಗಳು ಪೂರ್ಣವಾದ ಬಳಿಕ ಯುವನಿಧಿ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಅಂದ್ರೆ 2023ರ ನವಂಬರ್‌ ಬಳಿಕ ವಿದ್ಯಾರ್ಥಿಗಳ ಖಾತೆಗೆ ಹಣವನ್ನ ಜಮಾ ಮಾಡಲಿದೆ. ಇದಕ್ಕೆ ಸಂಬಂಧಿಸಿದ ನಿಯಮ, ಷರತ್ತು, ಅರ್ಜಿ ಸಲ್ಲಿಸುವ ವಿಧಾನವನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಯುವನಿಧಿಗೆ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ನೊಂದಾಯಿಸಬೇಕಾಗುತ್ತದೆ.

-masthmagaa.com

Contact Us for Advertisement

Leave a Reply