ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಯೋಗ ಗುರು ಬಾಬಾ ರಾಮದೇವ್‌!

masthmagaa.com:

ಯೋಗ ಗುರು ಬಾಬಾ ರಾಮದೇವ್‌ ಮಹಿಳೆಯರ ಉಡುಪುಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದಾರೆ. ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಸಲ್ವಾರ್‌ನಲ್ಲಿಯೂ ಚೆನ್ನಾಗಿ ಕಾಣ್ತಾರೆ ಹಾಗೂ ನನ್ನ ದೃಷ್ಟಿಯಲ್ಲಿ ಏನನ್ನೂ ಧರಿಸದಿದ್ದರೂ ಚೆನ್ನಾಗಿಯೇ ಕಾಣ್ತಾರೆ ಅಂತ ಹೇಳಿದ್ದಾರೆ. ಪತಂಜಲಿ ಯೋಗಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿ ಥಾಣೆಯಲ್ಲಿ ಆಯೋಜಿಸಿದ್ದ ಯೋಗ ವಿಜ್ಞಾನ ಶಿಬಿರದಲ್ಲಿ ಮಾತಾಡುವಾಗ ಹೀಗೆ ಹೇಳಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದವರು ಮುಜುಗರಕ್ಕೀಡಾಗಿದ್ದಾರೆ. ಅವರ ಹೇಳಿಕೆಯ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ತೀವ್ರ ಆಕ್ರೋಶ ಹೊರಹಾಕಲಾಗಿದೆ.

-masthmagaa.com

Contact Us for Advertisement

Leave a Reply