ವುಮೆನ್ಸ್‌ ಪ್ರೀಮಿಯರ್‌ ಲೀಗ್ ಸೀಸನ್-2ರ ವೇಳಾ ಪಟ್ಟಿ ಪ್ರಕಟ!

masthmagaa.com:

‌ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನ ಎರಡನೇ ಆವೃತ್ತಿಯ ವೇಳಾ ಪಟ್ಟಿ ಪ್ರಕಟಗೊಂಡಿದೆ. ದೇಶದ ಎರಡು ಸ್ಥಳಗಳಲ್ಲಿ ಈ ಪಂದ್ಯಾವಳಿಗಳನ್ನ ಆಯೋಜಿಸಲಾಗಿದೆ. ಫೆಬ್ರುವರಿ 23ರಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ಸೇರಿದಂತೆ ಮೊದಲ ಹಂತದ ಪಂದ್ಯಗಳು ನಡೆಯಲಿವೆ. ಇನ್ನು ಫೈನಲ್‌ ಸೇರಿದಂತೆ ಎರಡನೇಯ ಹಂತದ ಮ್ಯಾಚ್‌ಗಳು ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ಜರುಗಲಿವೆ. ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೆಬ್ರವರಿ 24 ರಿಂದ WPL ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.

-masthmagaa.com

Contact Us for Advertisement

Leave a Reply