ಥೈಲ್ಯಾಂಡ್‌ನಲ್ಲಿ ಹೆಚ್ಚಾದ ವಾಯುಮಾಲಿನ್ಯ ಜನರಿಗೆ ಮನೆಯಿಂದ ಹೊರಬರದಂತೆ ಸೂಚನೆ!

masthmagaa.com:

ಥೈಲ್ಯಾಂಡ್‌ನಲ್ಲಿ ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ ಜನರಿಗೆ ಮನೆಯಲ್ಲಿಯೇ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಥೈಲ್ಯಾಂಡ್‌ನ ಚಿಯಾಂಗ್ ಮಾಯ್‌ನಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ತಲುಪಿರೊ ಹಿನ್ನಲೆ ಎಲ್ಲರೂ ಮನೆಯಲ್ಲಿ ಇರುವಂತೆ ಹಾಗೂ ಮನೆಯಿಂದಲೇ ಕೆಲಸ ಮಾಡುವಂತೆ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ವಾಯುಮಾಲಿನ್ಯ ಹಾಟ್‌ಸ್ಪಾಟ್‌ಗಳಾಗಿರುವ ದೆಹಲಿ ಮತ್ತು ಲಾಹೋರ್‌ಗಿಂತಲೂ ಅತಿಹೆಚ್ಚು ವಾಯುಮಾಲಿನ್ಯವನ್ನ ಚಿಯಾಂಗ್‌ ಮಾಯ್‌ ದಾಖಲಿಸಿದೆ ಅಂತ IQAir ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

-masthmagaa.com

Contact Us for Advertisement

Leave a Reply