ಕೆಜಿಎಫ್ ಚಾಪ್ಟರ್-2ಗೆ ಹೈಕೋರ್ಟ್ ಬಿಗ್ ರಿಲೀಫ್..!

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಚಿತ್ರತಂಡಕ್ಕೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಈ ಹಿಂದೆ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಸದಂತೆ ಕೋಲಾರ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿತ್ತು. ಆದ್ರೆ ಈಗ ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಶೂಟಿಂಗ್ ವೇಳೆ ದುಬಾರಿ ಸೆಟ್ ಹಾಕಲಾಗಿತ್ತು. ಆದ್ರೆ ಇಲ್ಲಿ ಭಾರಿ ಪ್ರಮಾಣದಲ್ಲಿ ಪರಿಸರ ನಾಶ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೋರ್ಟ್ ಚಿತ್ರೀಕರಣ ನಡೆಸದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ನಿರ್ಮಾಪಕ ವಿಜಯ್ ಕಿರಗಂದೂರು ಹೈಕೋರ್ಟ್ ಮೆಟ್ಟಿಲೇರಿ, ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಗಿಸೋದಾಗಿ ಮನವಿ ಮಾಡಿದ್ದರು. ಅದರಂತೆ ಮನವಿ ಪುರಸ್ಕರಿಸಿದ ನ್ಯಾಯಾಲಯದ ಚಿತ್ರೀಕರಣಕ್ಕೆ ಅನುವು ಮಾಡಿಕೊಟ್ಟಿದೆ.

Contact Us for Advertisement

Leave a Reply