ರೈತರ ಸಂಪೂರ್ಣ ಸಾಲಮನ್ನಾ ಮಾಡಕ್ಕಾಗಲ್ಲ: ರೈತರಿಗೆ ಯಡಿಯೂರಪ್ಪ ಶಾಕ್

ಸಿದ್ದರಾಮಯ್ಯ ರೈತರ ಕೆಲವೊಂದು ಸಾಲಗಳನ್ನು ಮನ್ನಾ ಮಾಡಿದ್ರು. ಆದ್ರೆ ಆಮೇಲೆ ಅಧಿಕಾರಕ್ಕೇರಿದ ಸಿಎಂ ಕುಮಾರಸ್ವಾಮಿಯವರು ತಾವು ನೀಡಿದ್ದ ಭರವಸೆಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದ್ರು. ಆದ್ರೆ ಈವರೆಗೆ ರೈತರ ಸಾಲ ಮನ್ನಾ ಆಗಿಲ್ಲ. ಈಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಕಡ್ಡಿ ಮುರಿದಂತೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಜೊತೆಗೆ ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಏನೆಲ್ಲಾ ಅನಾಹುತ ಸಂಭವಿಸಿದೆ ಎಂದೂ ಎಲ್ಲರಿಗೂ ಗೊತ್ತೇ ಇದೆ. ಹೀಗಾಗಿ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ, ಹಣವನ್ನು ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಇಂಥಹ ಪರಿಸ್ಥಿತಿಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಹೇಗೆ ಸಾಧ್ಯ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

Contact Us for Advertisement

Leave a Reply