ತಂತಿ ಮೇಲೆ ನಡೆಯುತ್ತಿದ್ದೇನೆ ಎಂದಿದ್ಯಾಕೆ ಬಿಎಸ್‍ವೈ..?

ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ನಾನು ತಂತಿಯ ಮೇಲೆ ನಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಮಾತನಾಡಿದ ಅವರು, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ. ಯಾವುದೇ ತೀರ್ಮಾನ ಕೈಗೊಳ್ಳಲು 10 ಬಾರಿ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಸರ್ಕಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಬೀರುವ ಪರಿಣಾಮದ ಬಗ್ಗೆ ಯೋಚಿಸಬೇಕಾಗುತ್ತೆ ಅಂದ್ರು. ಯಡಿಯೂರಪ್ಪ ಅವರ ಈ ಮಾತು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸದೆ. ಹಾಗೂ ಆಡಳಿತದಲ್ಲಿ ಎಲ್ಲವೂ ಸುಗಮವಾಗಿಲ್ಲ ಅನ್ನೋದು ಬಯಲಾಗಿದೆ.

Contact Us for Advertisement

Leave a Reply