ಬಿಎಸ್‍ವೈ ಕಡೆಗಣಿಸಿದ್ರೆ ಬಿಜೆಪಿಗೆ ಉಳಿಗಾಲವಿಲ್ಲ: ನಳಿನ್‍ಗೆ ಪತ್ರ

ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಕಡೆಗಣಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ. ಯಡಿಯೂರಪ್ಪರನ್ನು ಕಡೆಗಣಿಸಿದ್ರೆ ಪಕ್ಷಕ್ಕೆ ಉಳಿಗಾಲವಿಲ್ಲ. ಉತ್ತರ ಕರ್ನಾಟಕ ಬಿಜೆಪಿಯನ್ನು ಬೆಂಬಲಿಸುವುದೇ ಯಡಿಯೂರಪ್ಪ ಅವರಿಗಾಗಿ. ಒಂದ್ವೇಳೆ ಅವರನ್ನೇ ಕಡೆಗಣಿಸಿದ್ರೆ ಉತ್ತರ ಕರ್ನಾಟಕದ 13 ಜಿಲ್ಲೆಗಳ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ಮುಖ್ಯಮಂತ್ರಿಗಳನ್ನು ಕಡೆಗಣಿಸೋದು ಸರಿಯಲ್ಲ. ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ಯಡಿಯೂರಪ್ಪರನ್ನು ಬೆಂಬಲಿಸಿದೆ. ಹೀಗಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಿರಿ ಎಂದು ನಳಿನ್ ಕುಮಾರ್ ಕಟೀಲ್ ಅವರಿಗೆ ಎಚ್ಚರಿಸಲಾಗಿದೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಏರಬೇಕಾದ್ರೆ ಯಡಿಯೂರಪ್ಪ ಬೆಂಬಲ ಬೇಕೇಬೇಕು. ಅವರನ್ನು ಕಡೆಗಣಿಸಿ ಪಕ್ಷ ಸಂಘಟನೆಗೆ ಮುಂದಾದ್ರೆ ಉತ್ತರ ಕರ್ನಾಟಕದಲ್ಲಿ ಪಕ್ಷವೇ ಅಸ್ತಿತ್ವದಲ್ಲಿ ಇರೋದಿಲ್ಲ ಎಂದು ಹೇಳಿದ್ದಾರೆ.

Contact Us for Advertisement

Leave a Reply