ಮುಜುರಾಯಿ ಇಲಾಖೆ ದೇವಸ್ಥಾನಗಳ ಆಡಳಿತ ಮಂಡಳಿಗೆ ಶಾಕ್..!

ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ಒಳಪಡೋ ರಾಜ್ಯದ ಎಲ್ಲಾ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸಿಎಂ ಯಡಿಯೂರಪ್ಪ ಬಿಗ್ ಶಾಕ್ ಕೊಟ್ಟಿದ್ದಾರೆ. ಈ ಎಲ್ಲಾ ದೇವಸ್ಥಾನಗಳ ಧರ್ಮದರ್ಶಿ ವ್ಯವಸ್ಥಾಪನಾ ಸಮಿತಿಗಳನ್ನು ರದ್ದು ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ದೋಸ್ತಿ ಸರ್ಕಾರದ ಅವಧಿಯಲ್ಲಿ ನೇಮಿಸಲಾಗಿದ್ದ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸದಸ್ಯರ ನಾಮನಿರ್ದೇಶನ ಮತ್ತು ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಅಲ್ಲದೆ ದೇಗುಲಗಳ ಆಡಳಿತವನ್ನು ತಕ್ಷಣವೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಹಿಸಿಕೊಳ್ಳಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ. ಇದೇ ಸೆಪ್ಟೆಂಬರ್ 20ರಂದು ಸಿಎಂ ಯಡಿಯೂರಪ್ಪ ಈ ಆದೇಶ ಹೊರಡಿಸಿದ್ದಾರೆ.

Contact Us for Advertisement

Leave a Reply