ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸೋಮವಾರದಿಂದ ನಾಲ್ಕು ದಿನ ಮಳೆ ಅಬ್ಬರ ಜೋರಾಗಿ ಇರಲಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂಗಾರು ಚುರುಕು ಹಾಗೂ ಮೇಲ್ಮೈ ಸುಳಿಗಾಳಿಯಿಂದಾಗಿ ಭಾರಿ ಪ್ರಮಾಣದಲ್ಲಿ ಮಳೆಯಾಗಬಹುದು. ಸೆಪ್ಟೆಂಬರ್ 23ರಿಂದ ಸೆ.26ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗೋ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇವೆಲ್ಲದರ ಜೊತೆಗೆ ಅತ್ತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಬೇರೆ ಶುರುವಾಗಿದೆ.

Contact Us for Advertisement

Leave a Reply